ನೆಲನಲ್ಲಿ ಎಂಬ ಗಿಡಮೂಲಿಕೆಯಲ್ಲಿ ಅಡಗಿದೆ ಹಲವು ರೋಗಗಳನ್ನು ಹೋಗಲಾಡಿಸುವ ಶಕ್ತಿ..!
ನೆಲನೆಲ್ಲಿಯ ಎಲೆಗಳು ಚಿಕ್ಕದಾಗಿದ್ದು ನೆಲ್ಲಿಗಿಡದ ಎಲೆಗಳನ್ನೇ ಹೋಲುತ್ತವಾದ್ದರಿಂದ ಮತ್ತು ಹಣ್ಣುಗಳು ಪುಟ್ಟದಾಗಿದ್ದು ಚಿಕ್ಕಚಿಕ್ಕ ಎಲೆಗಳ ಹಿಂಬದಿಯಲ್ಲಿ ಜೋಡಣೆಗೊಂಡಿದ್ದು ನೆಲ್ಲಿಕಾಯಿಯಂತೆ ಕಾಣುತ್ತವಾದ್ದರಿಂದ ನೆಲನೆಲ್ಲಿಯು ಯುಫೋರ್ಬಿಯೇಸಿ ಕುಟುಂಬಕ್ಕೆ ಸೇರಿದೆ. ಸಣ್ಣ ಮೂಲಿಕೆ ಜಾತಿಗೆ ಸೇರಿದ,ಒಂದು ಅಡಿ ಎತ್ತರ ಬೆಳೆಯುವ ಪುಟ್ಟ ಏಕವಾರ್ಷಿಕ ಸಸ್ಯ. ಕಾಂಡವು ಮೃದುವಾಗಿದ್ದು, ಕೆಂಪು ಮಿಶ್ರಿತ ಹಸಿರು ಬಣ್ಣದಲ್ಲಿದೆ.ಕಾಂಡದ ಮೇಲೆ ಅರ್ಧ ಅಂಗುಲ ಅಂತರದಲ್ಲಿ ಹಸಿರು ಬಣ್ಣದ ಎಲೆಗಳು ಪರ್ಯಾಯವಾಗಿ ಜೋಡಣೆಗೊಂಡಿರುತ್ತವೆ. ಎಲೆ ಕಂಕುಳಲ್ಲಿ ಹಸಿರು ಮಿಶ್ರಿತ ಹಳದಿ ಬಣ್ಣದ ಹೂಗಳು ಕಾಣಿಸಿಕೊಳ್ಳೂತ್ತವೆ. ಕಾಯಿ ಹಸಿರು ಬಣ್ಣದ್ದಾಗಿದ್ದು ಸಾಸಿವೆ ಗಾತ್ರದಷ್ಟು ಇರುತ್ತದೆ.
ಔಷಧೀಯ ಗುಣಗಳು
ಕಾಮಾಲೆಗೆ ನೆಲನೆಲ್ಲಿ ಅತ್ಯುತ್ತಮ ಔಷಧಿ. ಸಿದ್ಧ ವೈದ್ಯ ಪದ್ಧತಿಯಲ್ಲಿ ನೆಲನೆಲ್ಲಿಯನ್ನು ದಶಕಗಳ ಕಾಲದಿಂದಲೂ ಔಷಧಿಯಾಗಿ ಬಳಸಲಾಗುತ್ತದೆ.ಯುನಾನಿ ವೈದ್ಯಪದ್ಧತಿಯಲ್ಲಿ ಗಾಯ, ಕಜ್ಜಿ ಮತ್ತು ಜಂತುಹುಳುಗಳ ನಿವಾರಣೆಗೆ ನೆಲನೆಲ್ಲಿಯನ್ನು ಬಳಸಲಾಗುತ್ತದೆ.
ಭೇದಿಯಾಗುತ್ತಿದ್ದಲ್ಲಿ ನೆಲನೆಲ್ಲಿಯ ಎಳೆಯ ಕಾಂಡವನ್ನು ಜಜ್ಜಿ ರಸ ತೆಗೆದು ನಾಲ್ಕು ಗಂಟೆಗಳಿಗೊಂದು ಬಾರಿ ಕುಡಿಯಬೇಕು ಇಲ್ಲವೇ ಹಾಗೆಯೇ ತಿನ್ನಬಹುದು.
ಗಾಯಗಳಾಗೆದ್ದಲ್ಲಿ ಈ ಗಿಡವನ್ನು ಬೇರು ಸಹಿತ ಜಜ್ಜಿ ಲೇಪಿಸಬೇಕು.
ಚರ್ಮರೋಗಗಳಲ್ಲಿ ನೆಲನೆಲ್ಲಿಯ ಎಲೆಗಳನ್ನು ಉಪ್ಪಿನೊಂದಿಗೆ ಅರೆದು ಲೇಪಿಸುವುದರಿಂದನವೆ ಕಡಿಮೆಯಾಗುತ್ತದೆ.
ನೆಲನೆಲ್ಲಿಯು ಕುಷ್ಠ, ಆಸ್ತಮಾ, ಬಿಕ್ಕಳಿಕೆ ನಿವಾರಣೆಯಲ್ಲಿಯೂ ಉಪಯುಕ್ತ ಔಷಧಿಯಾಗಿದೆ.
ಹೊಟ್ಟೆನೋವು: ಅಜೀರ್ಣದಿಂದ ಹೊಟ್ಟೆನೋವು ಉಂಟಾಗಿದ್ದಲ್ಲಿ ನೆಲನೆಲ್ಲಿ ಸೊಪ್ಪಿನ ಕಷಾಯ ತಯಾರಿಸಿ ಅದಕ್ಕೆ ತುಪ್ಪದಲ್ಲಿ ಹರಿದ ಹಿಂಗಿನ ಪುಡಿಯನ್ನು ಒಂದು ಚಿಟಿಕೆ ಬೆರೆಸಿ ಕುಡಿಯಬೇಕು.
ಅತಿರಕ್ತಸ್ರಾವ: ಮಾಸಿಕಸ್ರಾವದ ಸಮಯದಲ್ಲಿ ಅತಿರಕ್ತಸ್ರಾವವಾಗುತ್ತಿದ್ದಲ್ಲಿ ನೆಲನೆಲ್ಲಿಯ ಚಟ್ನಿಯನ್ನು ಆಹಾರದಲ್ಲಿ ಸೇವಿಸುವುದಲ್ಲದೇ ನೆಲನೆಲ್ಲಿ ಕಷಾಯ ತಯಾರಿಸಿ ದಿನಕ್ಕೆ ಮೂರು ಬಾರಿ ಕುಡಿಯಬೇಕು.
ರೋಗನಿರೋಧಕ ಶಕ್ತಿ: ನೆಲನೆಲ್ಲಿಯ ರಸವನ್ನು ಇಲ್ಲವೇ ಕಷಾಯವನ್ನು ಸೇವನೆ ಮಾಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.ಕಾಲರ,ಚಿಕುನ್ಯಾ,ಡೆಂಗೆ ಮುಂತಾದ ಕಾಯಿಲೆಗಳು ಹರಡಿದ್ದ ಸಮಯದಲ್ಲಿ ಆರೋಗ್ಯವಂತರು ನೆಲನೆಲ್ಲಿಯ ಕಷಾಯ ಇಲ್ಲವೇ ರಸ ಕುಡಿಯುವುದರಿಂದ ಕಾಯಿಲೆ ಕಾಂಡದಂತೆ ತಡೆಯಬಹುದು.