ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ವೀಳ್ಯದೆಲೆಯ ಮಹತ್ವ

“ವೀಳ್ಯದೆಲೆಯ ಮಹತ್ವ“🌱🌱🌱🌱🌱🌱
೧. ವೀಳ್ಯದೆಲೆ ತುದಿಯಲ್ಲಿ – ಲಕ್ಷ್ಮೀವಾಸ..
೨. ವೀಳ್ಯದೆಲೆ ಬಲಭಾಗದಲ್ಲಿ ಬ್ರಹ್ಮ ದೇವರ ವಾಸ..
೩. ವೀಳ್ಯದೆಲೆ ಮಧ್ಯದಲ್ಲಿ ಸರಸ್ವತೀ ದೇವಿ..
೪. ವೀಳ್ಯದೆಲೆ ಎಡಭಾಗದಲ್ಲಿ ಪಾರ್ವತೀ ದೇವಿ..
೫. ವೀಳ್ಯದೆಲೆ ಸಣ್ಣದಂಟಿನಲ್ಲಿ ಮಹಾವಿಷ್ಣುವಿನ ವಾಸ..
೬. ವೀಳ್ಯದೆಲೆ ಹಿಂಭಾಗದಲ್ಲಿ ಚಂದ್ರದೇವತೆ ವಾಸ..
೭. ವೀಳ್ಯದೆಲೆ ಎಲ್ಲಾ ಮೂಲೆಗಳಲ್ಲಿ ಪರಮೇಶ್ವರನ ವಾಸ.
೮. ವೀಳ್ಯದೆಲೆಯ ಬುಡದಲ್ಲಿ ಮೃತ್ಯುದೇವತೆಯ ವಾಸ.. (ಈ ಕಾರಣಕ್ಕೆ ತಾಂಬೂಲ ಹಾಕಿಕೊಳ್ಳುವಾಗ ತುದಿ ಭಾಗ ತೆಗೆದು ಹಾಕಿಕೊಳ್ಳುವುದು)
೯. ವೀಳ್ಯದೆಲೆ ತೊಟ್ಟಿನಲ್ಲಿ ಅಹಂಕಾರ ದೇವತೆ ಹಾಗೂ ದಾರಿದ್ರ್ಯಲಕ್ಷ್ಮೀ ಇರುತ್ತಾರೆ.. (ಆದುದರಿಂದನೇ ವೀಳ್ಯದೆಲೆ ಹಾಕಿಕೊಳ್ಳುವವರು ತೊಟ್ಟನ್ನು ಮುರಿದು ಹಾಕುತ್ತಾರೆ.., ಅಹಂಕಾರ ಹಾಗೂ ದಾರಿದ್ರ್ಯಲಕ್ಷ್ಮೀ ಬರಬಾರದೆಂಬ ಅರ್ಥ..)
೧೦. ವೀಳ್ಯದೆಲೆ ಮಧ್ಯಭಾಗದ ನಂತರ ಮನ್ಮಥನ ವಾಸ.., ಈ ಎಲ್ಲಾ ದೇವರುಗಳು ಇರೋದ್ರಿಂದಾನೆ, ವೀಳ್ಯದೆಲೆ ತಾಂಬೂಲಕ್ಕೆ ಇಷ್ಟು ಮಹತ್ವ..
ಪೂರ್ವ ಅಥವಾ ಉತ್ತರ ದಿಕ್ಕಿಗೆ ತುದಿ ಬರುವ ತರಹ ಇಟ್ಟು ದೇವರಿಗೆ ನೈವೇದ್ಯ ಮಾಡಬೇಕು..
ಯಾರ ಮನೆಯಲ್ಲೇ ತಾಂಬೂಲ ಕೊಟ್ಟರೂ, ದೇವರ ಮುಂದೆ ಇಟ್ಟು ನಮಸ್ಕಾರ ಮಾಡಿ, ಆ ನಂತರ ಉಪಯೋಗಿಸಬೇಕು.. ಮಂಗಳವಾರ, ಶುಕ್ರವಾರಗಳಂದು ಯಾವುದೇ ಕಾರಣಕ್ಕೂ ವೀಳ್ಯದೆಲೆ ಹೊರಗೆ ಹಾಕಬಾರದು..
ಹಸಿರಾಗಿರುವ ಮತ್ತು ಅಂದವಾಗಿ ಹಸ್ತದ ಆಕಾರ ಇರುವ ಎಳೆಯ ವೀಳ್ಯದೆಲೆ ನೈವೇದ್ಯ ಮಾಡಬೇಕು ಮತ್ತು ತಾಂಬೂಲ ಕೊಡಬೇಕು.

Leave a Reply

Your email address will not be published. Required fields are marked *

Translate »