🔯 ಆಧ್ಯಾತ್ಮಿಕ ವಿಚಾರ.🔯
ಭಗವದ್ಗೀತೆಯಲ್ಲಿ ಶ್ರೀ ಕೃಷ್ಣ ಯಾವ ವೃಕ್ಷವನ್ನು ಅವಿನಾಶಿ ಅಂತ ಹೇಳಿದ್ದಾನೆ…?
ಸರಿಯಾದ ಉತ್ತರ ಅಶ್ವಥ ವೃಕ್ಷ ಹಾಗಾದರೆ ಅಶ್ವಥ ವೃಕ್ಷಕ್ಕೆ ಯಾಕಷ್ಟು ಮಹತ್ವ…..
ವೇದವನ್ನು ಉಪದೇಶ ಮಾಡಿದ ಭಗವಂತನ ವಿಶೇಷ ಅವತಾರ ಅಶ್ವರೂಪ ಹಯಗ್ರೀವ. ಅಶ್ವದ ಹಾಗೆ ಇದ್ದು ವೇದೋಪದೇಶ ಮಾಡಿದ ಭಗವಂತನನ್ನು ‘ಅಶ್ವತ್ಥಃ’ ಎಂದು ಕರೆಯುತ್ತಾರೆ.
ಕೃಷ್ಣ ಹೇಳುತ್ತಾನೆ: “ಸರ್ವ ವೃಕ್ಷಗಳಲ್ಲಿ ಅಶ್ವತ್ಥ ನಾನು” ಎಂದು. ಅಶ್ವತ್ಥಮರ ಇಂದು ಮೇಲ್ನೋಟದಲ್ಲಿ ನೋಡುವವರಿಗೆ ಯಾವುದಕ್ಕೂ ಉಪಯೋಗವಿಲ್ಲದ ಮರ. ಭಗವಂತ ಈ ಮರಕ್ಕೆ ಮಹತ್ವ ಕೊಟ್ಟು ಹೇಳದಿದ್ದರೆ ಈ ಮರದ ಬಗ್ಗೆ ನಮಗೆ ಏನೂ ತಿಳಿದಿರುತ್ತಿರಲಿಲ್ಲ.
ಏಕೆಂದರೆ ಈ ಮರ ನಮಗೆ ತಿನ್ನುವ ಹಣ್ಣನ್ನಾಗಲಿ, ಸುಗಂಧವಾದ ಹೂವನ್ನಾಗಲಿ ಕೊಡುವುದಿಲ್ಲ. ಈ ಮರದಿಂದ ಪೀಠೊಪಕರಣ ಮಾಡಲು ಸಾಧ್ಯವಿಲ್ಲ. ವಿಶಾಲವಾಗಿ ಬೆಳೆದು ತನ್ನ ಸುತ್ತಲಿನ ಪ್ರದೇಶವನ್ನು ಆಕ್ರಮಿಸಿ ನಿಲ್ಲುವ ಈ ಮರ, ಮೇಲ್ನೋಟಕ್ಕೆ ಜನರಿಗೆ ಕಾಟ ಕೊಡುವ ಮರ!
ಆದರೆ ಇಲ್ಲಿ ಕೃಷ್ಣ ಹೇಳುತ್ತಾನೆ “ವೃಕ್ಷಗಳ ಸಮುದಾಯದಲ್ಲಿ ಶ್ರೇಷ್ಠ ವೃಕ್ಷ ಅಶ್ವತ್ಥ” ಎಂದು. ಏಕೆ ಈ ಮರಕ್ಕೆ ಇಷ್ಟು ಪ್ರಾಧಾನ್ಯ ಎನ್ನುವುದು ತಿಳಿಯದೆ ಇಂದು ನಾವು ಅದನ್ನು ಪೂಜಿಸುತ್ತೇವೆ ಅಥವಾ ಇನ್ನು ಕೆಲವರು ನಿರ್ಲಕ್ಷಿಸುತ್ತಾರೆ.
ಈ ಮರವನ್ನು ನೆಟ್ಟರೆ ಪುಣ್ಯಬರುತ್ತದೆ ಎನ್ನುವ ಕಾರಣಕ್ಕೆ ಮನೆಯಿಂದ ದೂರದಲ್ಲಿ ಎಲ್ಲೋ ದೇವಸ್ಥಾನದಲ್ಲಿ ಅರಳಿ ಮರ ನೆಡುವುವವರಿದ್ದಾರೆ. ಇಂದು ಈ ಮರದ ಮಹತ್ವ ಹೆಚ್ಚಿನವರಿಗೆ ತಿಳಿದಿಲ್ಲ.
ಹಿಂದಿನವರು ಆಲ, ಅರಳಿ ಮತ್ತು ಅತ್ತಿ ಈ ಮೂರು ಮರಗಳಿಗೆ ಬಹಳ ಮಹತ್ವ ಕೊಟ್ಟರು. [ಬೇಂದ್ರೆಯವರು ತಮ್ಮ ತೋಟದಲ್ಲಿ ಮೂಡಿಬಂದ ಈ ಮೂರು ಗಿಡಗಳನ್ನು ನೋಡಿ- “ನಮ್ಮ ತೋಟದಲ್ಲಿ ಭಗವಂತ ಮೂರು ರೂಪದಲ್ಲಿ ಬಂದಿದ್ದಾನೆ” ಎಂದು ಹೃದಯತುಂಬಿ ಹೇಳಿದ್ದನ್ನು ಇಲ್ಲಿ ಬನ್ನಂಜೆಯವರು ನೆನಪಿಸಿಕೊಂಡಿದ್ದಾರೆ].
ಹಿಂದೆ ಯಜ್ಞ ಮಾಡುವಾಗ ಶಮಿ ಮತ್ತು ಅರಣಿ(ಅರಳಿ) ಸಮಿತೆಯನ್ನು ಮಥನ ಮಾಡಿ ಅದರಿಂದ ಅಗ್ನಿ ಕಿಡಿ ತರಿಸಿ, ಅಗ್ನಿ ಸೃಷ್ಟಿ ಮಾಡುತ್ತಿದ್ದರು. ಯಜ್ಞದಲ್ಲಿ ಅರಳಿಯ ಸಮಿತೆಯನ್ನು ಮುಖ್ಯವಾಗಿ ಉಪಯೋಗಿಸುತ್ತಾರೆ.
ಅಶ್ವತ್ಥಮರದ ಸಮಿತೆಯನ್ನು ಕಾಷ್ಟವಾಗಿ ಯಜ್ಞದಲ್ಲಿ ಉಪಯೋಗಿಸಿದರೆ, ಅಲ್ಲಿ ಉರಿಯುವ ಬೆಂಕಿಯ ಜ್ವಾಲೆಯಲ್ಲಿ ಒಂದು ವಿಶಿಷ್ಠ ಶಕ್ತಿ ಹೊರ ಹೊಮ್ಮುತ್ತದೆ.
ಹೇಗೆ ಸೂರ್ಯನ ಕಿರಣದಲ್ಲಿ ಏಳು ಬಣ್ಣವಿದೆಯೋ ಹಾಗೆ ಅಗ್ನಿಯಲ್ಲಿ ಏಳು ಬಣ್ಣವಿದೆ. ಮುಂಡಕ ಉಪನಿಷತ್ತಿನಲ್ಲಿ ಅಗ್ನಿಯ ಜ್ವಾಲೆಯಿಂದ ಹೊಮ್ಮುವ ಏಳು ಬಣ್ಣವನ್ನು ಕಾಳಿ, ಕರಾಳಿ, ಮನೋಜವಾಚ, ಸುಲೋಹಿತಾಯಾಚ, ಸುಧೂಮ್ರವರ್ಣಾ, ಸ್ಫುಲಿಂಗಿನೀ, ವಿಶ್ವರುಚಿ ಎಂದು ಕರೆದಿದ್ದಾರೆ.
ಅಗ್ನಿಯ ಈ ಏಳು ಬಣ್ಣವನ್ನು ಸೂರ್ಯ ಕಿರಣದ ಏಳು ಬಣ್ಣದೊಂದಿಗೆ ಸಂಕ್ರಾಂತಗೊಳಿಸಿ ವಾತಾವರಣದಲ್ಲಿ ಅದರ ಪ್ರಭಾವ ತರುವುದೇ ಯಜ್ಞ.
ಈ ಕ್ರಿಯೆಗೆ ಅಶ್ವತ್ಥಸಮಿತೆ ಒಂದು ಪ್ರಮುಖ ಸಾಧನ.
ಇಂದು ಹಲವರು ಅಶ್ವತ್ಥಮರದಲ್ಲಿ ದೇವತಾ ಸನ್ನಿಧಾನವಿದೆ ಎಂದು ಅದಕ್ಕೆ ಪ್ರದಕ್ಷಿಣೆ ಬರುತ್ತಾರೆ.
ಮಕ್ಕಳಾಗದಿದ್ದಾಗ ಜೋತಿಷಿಗಳು ಅಶ್ವತ್ಥ ಪ್ರದಕ್ಷಿಣೆ ಬರುವಂತೆ ಹೇಳುತ್ತಾರೆ. ಇದು ಏಕೆ ಎನ್ನುವ ಕಲ್ಪನೆ ಇಲ್ಲದ ಜನ ಇದೆಲ್ಲವೂ ಮೂಢನಂಬಿಕೆ ಎಂದು ಮಾತನಾಡಿಕೊಳ್ಳುತ್ತಾರೆ.
ಜಗತ್ತಿನಲ್ಲಿರುವ ಎಲ್ಲ ಮರಗಳಿಗಿಂತ ಹೆಚ್ಚು ಆಮ್ಲಜನಕ ಕೊಡುವ ವೃಕ್ಷ ಅಶ್ವತ್ಥ.
ಇಂತಹ ಶುದ್ಧ ವಾಯುವಿನ ಉಸಿರಾಟದಿಂದ ಗರ್ಭದೋಷ ಸರಿಹೋಗುವ ಸಾಧ್ಯತೆ ಇದೆ ಎಂದು ಇಂದು ವಿಜ್ಞಾನ ಕೂಡ ಒಪ್ಪಿಕೊಂಡಿದೆ.
ಹಿಂದಿನ ಕಾಲದಲ್ಲಿ ಋಷಿಗಳು ಅಶ್ವತ್ಥ ಮರದ ಬುಡದಲ್ಲಿ ಕುಳಿತು ವೇದಾಧ್ಯಾಯನ ಮಾಡುತ್ತಿದ್ದರು. ಹೀಗೆ ಅಶ್ವತ್ಥ ಮರದಲ್ಲಿ ಭಗವಂತನ ವಿಶೇಷ ವಿಭೂತಿ ಆ ಮರಕ್ಕೆ ಇಂಥಹ ಅನೇಕ ವಿಶೇಷ ಶಕ್ತಿಯನ್ನು ಕೊಟ್ಟಿದೆ.
ಇಲ್ಲಿ ಬಂದಿರುವ ಭಗವಂತನ ನಾಮ ‘ಅಶ್ವತ್ಥಃ’.
ಅಶ್ವತ್ಥಮರ
🍃 ಅಶ್ವತ್ಥಮರದಲ್ಲಿ ಭಗವಂತನು ಹಯಗ್ರೀಯ ರೂಪದಿಂದ ವಿಶೇಷವಾಗಿ ಅಭಿವ್ಯಕ್ತನಾಗಿ ಈ ಮರವು ಉಳಿದೆಲ್ಲಾ ಮರಗಳಿಗಿಂತ ಹೆಚ್ಚು ಯೋಗ್ಯವೆಂದು ತೋರಿಸುತ್ತಾನೆ.
ಅಶ್ವತ್ಥ ವೃಕ್ಷದ ಮಧ್ಯಭಾಗದಲ್ಲಿ ವಿಷ್ಣು, ತುದಿಯಲ್ಲಿ ರುದ್ರ, ಮೂಲಭಾಗದಲ್ಲಿ ಬ್ರಹ್ಮ ದೇವರು ನೆಲೆಸಿರುವರು.
🍃 ಅಶ್ವತ್ಥಮರದ ದರ್ಶನ ಪಾಪನಾಶಕ, ಸ್ಪರ್ಶ ಶ್ರೀಕಾರಕ , ಪ್ರದಕ್ಷಿಣೆ ಆಯುಷ್ಯಕಾರಕ ಎಂದು ಪದ್ಮ ಪುರಾಣ ಹೇಳುತ್ತದೆ.
🍃 ಪ್ರತಿದಿನ ಈ ವೃಕ್ಷದ ಸ್ಪರ್ಶ ನಿಷಿದ್ಧ ಶನಿವಾರದಂದು ಮಾತ್ರ ಸ್ಪರ್ಶಿಸಬೇಕೆಂದು ಧರ್ಮಶಾಸ್ತ್ರಗಳು ವಿಧಿಸುತ್ತವೆ.
🍃ಸಂಧ್ಯಾಕಾಲದಲ್ಲಿ ಸೂರ್ಯಾಸ್ತವಾದ ಮೇಲೆ ಪ್ರದಕ್ಷಿಣೆ ಮಾಡಬಾರದು ಎಂದು ಪದ್ಮಪುರಾಣ ಹೇಳುತ್ತದೆ
🍃ಏಳು ಪ್ರದಕ್ಷಿಣೆ ಮಾಡಿದರೆ 10,000 ಗೋದಾನ ಮಾಡಿದಷ್ಟು ಪುಣ್ಯ ಲಭಿಸುತ್ತದೆ. ಬೇರೆ ಯಾವ ವೃಕ್ಷವು ಇಷ್ಟು ಪುಣ್ಯಪ್ರದವಲ್ಲ.
🍃 ಅಶ್ವತ್ಥ ಮರವನ್ನು ನೆಟ್ಟರೆ ಮೂರು ಸಂಪಿಗೆ ಮತ್ತು ಎಕ್ಕೆಗಿಡ, ಏಳು ಆಲದಮರ , ಎಂಟು ಬಿಲ್ವಪತ್ರೆಗಿಡ , ಮತ್ತು ನಿಂಬೆಮರ ನೆಟ್ಟಷ್ಟು ಫಲ.
🍃 ಜಲಾಶಯ , ನದಿ ಸಮೀಪದಲ್ಲಿ ಅಶ್ವತ್ಥಮರವನ್ನು ನೆಟ್ಟರೆ ಪಿತೃಗಳಿಗೆ ಬಹಳ ತೃಪ್ತಿಯಿಗುತ್ತದೆ. ಅದರ ಎಲೆಗಳು ಪರ್ವಕಾಲದಲ್ಲಿ ನೀರಿನಲ್ಲಿ ಬಿದ್ದಾಗಲೆಲ್ಲಾ ಪಿಂಡ ಸಮಾನವಾಗಿ ಪಿತೃಗಳಿಗೆ ಅಕ್ಷಯಲೋಕಗಳನ್ನು ಕೊಡುತ್ತದೆ.
***🙏
*!! ಶ್ರೀಕೃಷ್ಣಾರ್ಪಣಮಸ್ತು !!*
ಅಡ್ಮಿನ್ ಬಳಗ .
ಆಧ್ಯಾತ್ಮಿಕ ವಿಚಾರದ ಉಪಯುಕ್ತ ಮಾಹಿತಿ ನಿಮ್ಮಗೇ ಬೇಕಾದಲ್ಲಿ. ಸಂಪಾದಕೀಯ ಶಾಖೆ ಮಂಗಳೂರು.ಮೊಬೈಲ್ +919945295560
WhatsApp: https://chat.whatsapp.com/ISbrOeVLYcP5M7irDdsxKc
⬆️ಇಲ್ಲಿ ಕ್ಲಿಕ್ ಮಾಡಿ.