ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್ಸ್ ಇಸಿಎಸ್‌ಎಸ್ ಪ್ರೋಗ್ರಾಂ 2024-25ರ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಆಹ್ವಾನಿಸಲಾಗಿದೆ. ವಿದ್ಯಾರ್ಥಿವೇತನವು ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ಮತ್ತು ಅಗತ್ಯವಿರುವ ವಿದ್ಯಾರ್ಥಿಗಳಿಗೆ ನೆರವು ನೀಡುತ್ತದೆ. 1 ನೇ ತರಗತಿಯಿಂದ ಸ್ನಾತಕೋತ್ತರ ಹಂತದವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಂದ ಎಚ್‌ಡಿಎಫ್‌ಸಿ ಬ್ಯಾಂಕ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು 1 ರಿಂದ 12 ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್, ಅಂಡರ್‌ಗ್ರಾಜುಯೇಟ್ ಅಥವಾ ಸ್ನಾತಕೋತ್ತರ (ಸಾಮಾನ್ಯ ಮತ್ತು ವೃತ್ತಿಪರ ಸೇರಿದಂತೆ) ಕೋರ್ಸ್‌ಗಳನ್ನು ಅಭ್ಯಾಸ ಮಾಡುತ್ತಿರಬೇಕು. ಅರ್ಜಿದಾರರು ತಮ್ಮ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಮತ್ತು ಅವರ ಕುಟುಂಬದ ವಾರ್ಷಿಕ ಆದಾಯವು ರೂ. 2.5 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.
ಆನ್‌ಲೈನಲ್ಲಿ ಅರ್ಜಿ ಹಾಕಿ : https://www.hdfcbankecss.com/
ಕೊನೆಯ ದಿನಾಂಕ ಯಾವುದು? : 04-09-2024