ಮೂಗುತಿ ಧರಿಸುವುದರಿಂದಾಗುವ ಲಾಭಗಳು..!
೧. ‘ಮೂಗುತಿಯನ್ನು ಧರಿಸುವುದರಿಂದ ಮೂಗಿನ ಬಿಂದುವಿನ ಮೇಲೆ ಒತ್ತಡವು ನಿರ್ಮಾಣವಾಗಿ ‘ಬಿಂದುಒತ್ತಡದ (ಆಕ್ಯುಪ್ರೆಶರ್)’ ಉಪಚಾರವಾಗುವುದರಿಂದ ಅಲ್ಲಿನ ಕಪ್ಪು ಶಕ್ತಿಯು ಕಡಿಮೆಯಾಗುತ್ತದೆ.
೨. ಕೆಟ್ಟ ಶಕ್ತಿಗಳಿಂದ ಉಸಿರಾಟದ ಮಾರ್ಗದಿಂದ ಹಲ್ಲೆಯಾಗದಂತೆ ಮೂಗುತಿಯು ಮೂಗು ಮತ್ತು ಶ್ವಾಸಮಾರ್ಗವನ್ನು ರಕ್ಷಿಸುತ್ತದೆ.’
೩. ‘ಮೂಗುತಿಯಲ್ಲಿರುವ ಸಾತ್ತ್ವಿಕತೆ ಮತ್ತು ಚೈತನ್ಯದಿಂದ ಮೂಗಿನ ಸುತ್ತಲೂ ಚೈತನ್ಯದ ವಲಯವು ನಿರ್ಮಾಣವಾಗುತ್ತದೆ ಮತ್ತು ಮೂಗಿನ ಸುತ್ತಲಿನ ವಾಯುಮಂಡಲವು ಶುದ್ಧವಾಗುತ್ತದೆ. ಇದರಿಂದ ಶ್ವಾಸಮಾರ್ಗದಿಂದ ಶುದ್ಧಗಾಳಿಯು ದೇಹವನ್ನು ಪ್ರವೇಶಿಸಬಲ್ಲದು.’
ಸ್ತ್ರೀಯರಿಗೆ ಮಾತ್ರ ಮೂಗುತಿ ಹಾಕಲು ಹೇಳಿರುವುದರ ಹಿಂದೆಯೂ ಶಾಸ್ತ್ರವಿದೆ. ಸ್ತ್ರೀಯರ ಮನಸ್ಸು ಚಂಚಲವಾಗಿರುತ್ತದೆ. ಮೂಗುತಿಯನ್ನು ಧರಿಸುವುದರಿಂದ ಸ್ತ್ರೀಯರ ಚಂದ್ರನಾಡಿ ಕಾರ್ಯನಿರತವಾಗಿ ಮನಸ್ಸು ಸ್ಥಿರವಾಗುತ್ತದೆ. ಸ್ತ್ರೀಯರು ಯಾವುದೇ ಕಾರ್ಯವನ್ನು ಮಾಡುವಾಗ ಯೋಗ್ಯ ನಿರ್ಣಯ ತೆಗೆದುಕೊಳ್ಳಲು ಅನುಕೂಲವಾಗುತ್ತದೆ.
ಇದರಿಂದಲೇ ಹಿಂದೂ ಧರ್ಮದ ಮಹಾನತೆಯು ಗಮನಕ್ಕೆ ಬರುತ್ತದೆ! ಹಿಂದೂ ಧರ್ಮವು ಪ್ರತಿಯೊಂದು ವಿಷಯದಿಂದ ಅಂದರೆ ಆಚಾರಧರ್ಮದಿಂದ ಮಾನವನಿಗೆ ಆಧ್ಯಾತ್ಮಿಕ, ಶಾರೀರಿಕ ಮತ್ತು ಮಾನಸಿಕವಾಗಿ ಯೋಗ್ಯವಾದ ಕೃತಿಯನ್ನೇ ಮಾಡಲು ಕಲಿಸುತ್ತದೆ. ಮನುಷ್ಯನಿಗೆ ಅದರ ಶಾಸ್ತ್ರ ತಿಳಿಯದಿದ್ದರೂ, ಶ್ರದ್ಧೆಯಿಂದ ಅದೇ ರೀತಿ ಪಾಲನೆ ಮಾಡಿದರೆ ಅವನ ಐಹಿಕ ಮತ್ತು ಪಾರಮಾರ್ಥಿಕ ಜೀವನವು ಆನಂದದಲ್ಲಿರುವುದು. ಇದಕ್ಕೆ ಸಂದೇಹವೇ ಇಲ್ಲ.
ಆಧಾರ : ಸನಾತನ ಸಂಸ್ಥೆಯು ನಿರ್ಮಿಸಿದ ಗ್ರಂಥ ‘ಸ್ತ್ರೀಯರ ಆಭರಣಗಳ ಹಿಂದಿನ ಶಾಸ್ತ್ರ