ಭಾಗವತದಲ್ಲಿ ಶ್ರೀಕೃಷ್ಣ ತನ್ನ ಸ್ನೇಹಿತನಾದ ಉದ್ಧವನಿಗೆ ಉಪದೇಶಿಸಿದ ಉದ್ಧವಗೀತೆ ಮಾತುಗಳಲ್ಲಿ ದತ್ತಾತ್ರೇಯನ 24 ಮಾತುಗಳು ಬರುತ್ತವೆ. ಅವುಗಳೆಂದರೆ…
- ಸಹಸ್ರನಮನಗಳೊಂದಿಗೆ ಪೃಥ್ವಿ: ಪೃಥ್ವಿಯಿಂದ ಸಹನಶೀಲತೆ, ಕ್ಷಮೆ, ತಾಳ್ಮೆ ಹಾಗೂ ಎಲ್ಲಾ ಜೀವಿಗಳ ಒಳಿತಿಗಾಗಿ ಬಾಳುವುದನ್ನು ಕಲಿಯಬಹುದು.
- ವಾಯು: ಯಾವ ಸಂದರ್ಭದಲ್ಲಿಯು ವಾಯು ಹೇಗೆ ತನ್ನ ಗುಣಾದರ್ಶಗಳನ್ನು ಕಳೆದುಕೊಳ್ಳುವುದಿಲ್ಲವೋ ಹಾಗೆ ನಾವು ಯಾವ ವಿಷಯಗಳಿಂದಲೂ ವಿಚಲಿತರಾಗದೆ ಮಾರ್ಗಕ್ರಮಣವನ್ನು ಮಾಡಬೇಕು.
- ಆಕಾಶ: ಆಕಾಶಕ್ಕೆ ಯಾವುದೆ ಎಲ್ಲೆಗಳಿಲ್ಲ, ಅಂತೆಯೆ ನಮ್ಮ ಆತ್ಮವೂ ಕೂಡ ಇರಬೇಕು. ಹಾಗೆಯೆ ಎಲ್ಲವನ್ನು ಮೀರಿ ಅನಂತವಾಗಿರುವುದಲ್ಲದೆ ನಮ್ಮ ಮನಸ್ಸಿನ ಪ್ರಕ್ಷುಬ್ಧತೆಗಳಿಗೆ ಅತೀತವಾಗಿ ನಿರ್ಮಲವಾಗಿರ ಬೇಕೆಂದು ತಿಳಿಸತ್ತದೆ.
- ನೀರು: ನೀರಿನಂತೆಯೆ ಉತ್ತಮ ವ್ಯಕ್ತಿ ಸಹ ತನ್ನ ಬಳಿ ಇರುವ ಪ್ರತಿಯೊಬ್ಬರ ಆರೊಗ್ಯ, ಶಾಂತಿಗಳಿಗೆ ಅಗತ್ಯವಾಗುವಂತೆ ಬದುಕಬೇಕು. ನೀರು ಯಾವುದೆ ಅಹಮಿಕೆ ತೋರದಿರುವಂತೆ ಪರಮಾತ್ಮನ ಶ್ರೇಷ್ಠ ಸೃಷ್ಟಿಯ ತೆರೆದು ಬಾಳಬೇಕು.
- ಅಗ್ನಿ: ಬೆಂಕಿಗೆ ಯಾವುದೇ ಸ್ವರೂಪವಿಲ್ಲದಿದ್ದಾಗಿಯೂ ತಾನು ಸುಡುತ್ತಿರುವ ಕಟ್ಟಿಗೆ ರೂಪದಲ್ಲಿ ತನ್ನನ್ನು ಅಭಿವ್ಯಕ್ತಿಗೊಳಿಸಿಕೊಳ್ಳುತ್ತೆದೆ. ಅಂತೆಯೇ ತಾನು ಪಡೆದ ದೇಹದ ರೂಪದ ಮುಖಾಂತರವೆ ಆತ್ಮವೂ ತನ್ನನ್ನು ತೋರ್ಪಡಿಸಿಕೂಳ್ಳುತ್ತದೆ.
- ಚಂದ್ರ: ಚಂದ್ರ ಕುಗ್ಗುತ್ತಾನೆ ಹಿಗ್ಗುತ್ತಾನೆ. ಹೀಗೆ ನಿರಂತರ ಪ್ರಕ್ರಿಯೆಗಳಿಗೆ ಒಳಗಾದರು ಶಾಂತನಾಗಿರುತ್ತಾನೆ. ಹಾಗೆ ವ್ಯಕ್ತಿಯು ಜನನದಿಂದ ಮರಣದವರೆಗಿನ ನಿರಂತರ ಬದಲಾವಣೆಗಳಿಂದ ಬಾಧಿಸಲ್ಪಡುವುದಿಲ್ಲ.
- ಸೂರ್ಯ: ಸೂರ್ಯನ ಪ್ರತಿಫಲನಗಳು ಪರಮಾತ್ಮನು ಒಬ್ಬನೆ ಒಬ್ಬನಾಗಿದ್ದು ವಿವಿಧ ಜೀವಿಗಳ ಮೇಲೆ ತನ್ನನ್ನು ಪ್ರತಿಫಲಿಸಿದ್ದಾನೆ ಎಂಬುದನ್ನು ಸೂಚಿಸುತ್ತದೆ. ಹೀಗೆ ಆತ್ಮವು ದೇಹವಲ್ಲ ಎಂಬುದನ್ನು ಅರಿಯಬಹುದಾಗಿದೆ.
- ಪಾರಿವಾಳ: ಪಾರಿವಾಳವು ತನ್ನ ಮಕ್ಕಳಿಂದ ದೂರವಿರುವುದು ಅಸಾಧ್ಯವೆನಿಸಿ ತಾನೂ ಮೂರ್ಖತನದಿಂದ ಬಲೆಯಲ್ಲಿ ಬಂಧಿತಗೊಳ್ಳುತ್ತದೆ. ಪ್ರಾಜ್ಙನು ಅತಿಯಾದ ವ್ಯಾಮೋಹಗಳಿಂದ ಬಂಧಿತನಾಗುವುದಿಲ್ಲ.
- ಹೆಬ್ಬಾವು: ಕೆಲವೊಂದು ಸಮಯದಲ್ಲಿ ಹೆಬ್ಬಾವು ತಿನ್ನುವುದಕ್ಕೆ ಏನು ಸಿಗದಿದ್ದರೂ ಹೆದರುವುದಿಲ್ಲ ಪ್ರಾಜ್ಙನೂ ಸುಖದ ಆಮಿಷಗಳ ಅರಸುವಿಕೆಯಲ್ಲಿ ಎಂದೂ ಕಳೆದು ಹೋಗುವುದಿಲ್ಲ.
- ಸಮುದ್ರ: ನದಿಗಳು ಎಷ್ಟೇ ನೀರನ್ನು ತಂದರೂ, ತರದಿದ್ದರೂ ಸುಖ ಪಡುವುದು ಇಲ್ಲ, ದುಃಖ ಪಡುವುದಿಲ್ಲ. ಅಂತೆಯೆ ಮನುಷ್ಯನೂ ಭೋಗಗಳು ಲಭಿಸಿದಾಗ ಸುಖ ಪಟ್ಟು, ನೋವುಗಳು ಬಂದಾಗ ದುಃಖಿಸಲೂ ಬಾರದು ಎನ್ನುವುದನ್ನು ತಿಳಿಸಿದೆ.
- ದೀಪದ ಹುಳ: ದೀಪದ ಹುಳು ಹೇಗೆ ಉರಿವ ದೀಪಕ್ಕೆ ಸಿಲುಕಿ ಸಾಯುತ್ತದೆಯೊ ಹಾಗೆಯೇ ಯಾವ ಮನುಷ್ಯನು ಮೋಹಿತನಾಗುತ್ತಾನೋ ಅವನು ದೀಪದ ಹುಳದಂತೆ ಅದರಲ್ಲಿಯೆ ನಾಶನಾಗುತ್ತಾನೆ.
- ಜೇನುನೊಣ: ಜೇನುನೊಣದಂತೆ ಧನವನ್ನು( ಜೇನು ತುಪ್ಪವನ್ನು) ಸಂಗ್ರಹಿಸುವುದರಿಂದ ಹಠಾತ್ತಾಗಿ ಮರಣ ಬರುತ್ತದೆ. ಈ ಉಪದೇಶವನ್ನು ಪಡೆದುಕೊಂಡು ದ್ರವ್ಯಸಂಗ್ರಹವನ್ನು ಮಾಡುವುದನ್ನು ಬಿಡಬೇಕು.
- ಆನೆ: ಆನೆಯು ಸ್ತ್ರೀ ವ್ಯಾಮೋಹಕ್ಕೆ ಒಳಗಾಗಿ ಹೇಗೆ ಗುಂಡಿಯಲ್ಲಿ ಸಿಲುಕಿಕೊಳ್ಳುತ್ತದೆಯೋ ಹಾಗೆಯೆ ಯಾವ ಪುರುಷನು ಸ್ತ್ರೀ ಸುಖಕ್ಕೆ ಮರುಳಾಗುತ್ತಾನೆಯೋ ಅವನು ಬಂಧನದಲ್ಲಿ ಸಿಲುಕಿಕೊಳ್ಳುತ್ತಾನೆ.
- ಭ್ರಮರ: ಭ್ರಮರವು ಒಂದೇ ಕಮಲದ ಸುಗಂಧವನ್ನು ಸೇವಿಸದೆ ಬಹಳಷ್ಟು ಕಮಲಗಳ ಸುವಾಸನೆಯ ಆನಂದವನ್ನು ಪಡೆಯುತ್ತಿರುತ್ತದೆ. ಹಾಗೆಯೆ ನಾವು ಪ್ರತಿಯೊಂದನ್ನು ಕಲಿಯಲು ಪ್ರಯತ್ನಿಸಬೇಕು.
- ಕಸ್ತೂರಿ ಮೃಗ: ಕಸ್ತೂರಿ ಮೃಗಕ್ಕೆ ಸಂಗೀತದ ವ್ಯಾಮೋಹವು ಇರುವುದರಿಂದ ಬೇಟೆಗಾರ ಸಂಗೀತ ಕೇಳಿಸಿ ಸುಲಭವಾಗಿ ಭೇಟೆಯಾಡುತ್ತಾನೆ. ಇದರಂತೆಯೆ ನಾವು ಯಾವುದೆ ಮೋಹದಲ್ಲಿ ಸಿಲಿಕಿಕೊಳ್ಳಬಾರದು.
- ಮೀನು: ಮೀನು ತನ್ನ ಆಹಾರದ ರುಚಿಗೆ ಮೋಹಗೊಂಡು ಗಾಳಕ್ಕೆ ಸಿಲುಕುತ್ತದೆ. ಹಾಗೆಯೆ ಮನುಷ್ಯನು ನಾಲಿಗೆಯ ರುಚಿಯಲ್ಲಿ ಬದ್ಧನಾಗಿದ್ದು ಜನ್ಮ ಮರಣದ ಸುಳಿಯಲ್ಲಿ ಸಿಕ್ಕಿಕೊಳ್ಳುತ್ತಾನೆ.
- ಪಿಂಗಲಾ ವೇಶ್ಯೆ: ಎಲ್ಲಿಯವರೆಗೆ ಮನುಷ್ಯನಲ್ಲಿ ಆಸೆಯು ಪ್ರಬಲವಾಗಿರುತ್ತದೆಯೊ ಅಲ್ಲಿಯವರೆಗೆ ಅವನಿಗೆ ಸುಖ ನಿದ್ರೆ ಬರುವುದಿಲ್ಲ. ಯಾವ ಪುರುಷನು ಆಸೆಯನ್ನು ತ್ಯಜಿಸಿದ್ದಾನೆಯೊ ಅವನಿಗೆ ಈ ಸಂಸಾರದ ದುಃಖಗಳು ಬಧಿಸುವುದಿಲ್ಲ.
- ಟಿಟ್ಟಿಭ: ಟಿಟ್ಟಿಭ ಹಕ್ಕಿ ಮೀನನ್ನು ಕಚ್ಚಿಕೊಂಡು ಹೋಗುವಾಗ ಉಳಿದ ಹದ್ದು, ಕಾಗೆಗಳೆಲ್ಲಾ ಬೆನ್ನು ಹತ್ತಿದಾಗ ದಣಿದ ಟಿಟ್ಟಿಭ ಮೀನನ್ನು ಅಲ್ಲೆ ಬಿಡಲು, ಹದ್ದು ಅದನ್ನು ಕಚ್ಚಿಕೊಳ್ಳುವುದಕ್ಕೂ ಎಲ್ಲಾ ಕಾಗೆಗಳು ಅದನ್ನು ಬೆನ್ನು ಹತ್ತಿದವು. ಇದರಿಂದ ಆ ಟಿಟ್ಟಿಭವು ನಿಶ್ಚಿಂತವಾಗಿ ಕುಳಿತಿತು. ಈ ಸಂಸಾರದಲ್ಲಿ ಮೋಹವನ್ನು ಬಿಡುವುದರಲ್ಲಿಯೆ ಶಾಂತಿ ಇದೆ ಇಲ್ಲದಿದ್ದರೆ ಘೋರ ವಿಪತ್ತಿದೆ.
- #ಬಾಲಕ:
ಮನಾಪಮಾನಗಳ ಬಗ್ಗೆ ವಿಚಾರ ಮಾಡದೆ, ಎಲ್ಲ ಚಿಂತೆಗಳ ಪರಿಹಾರ ಮಾಡಿಕೊಂಡು ಬಾಲಕನಂತೆ ಆನಂದದಿಂದ ಇರಬೇಕು.
20.ಕೈಬಳೆ:
ಎರಡು ಬಳೆಗಳಿದ್ದರೆ ತಗುಲಿ ಶಬ್ದವಾಗುತ್ತದೆ. ಬಳೆಗಳು ಹೆಚ್ಚಿಗೆ ಇದ್ದರೆ ಹೆಚ್ಚು ಶಬ್ಬವಾಗುತ್ತದೆ. ಹಾಗೆಯೇ ಇಬ್ಬರು ಸೇರಿದ್ದಲ್ಲಿ ಮಾತುಕತೆಗಳಾಗುತ್ತವೆ. ಅದೇ ಹೆಚ್ಚು ಜನ ಸೇರಿದ್ದಲ್ಲಿ ಕಲಹವಾಗುತ್ತದೆ. ಆದ್ದರಿಂದ ಸಾಧನೆ ಮಾಡುವಾಗ ಒಂಟಿಯಾಗಿರಬೇಕು.
- ಶಸ್ತ್ರಕಾರ: ಶಸ್ತ್ರಕಾರ ಬಾಣವನ್ನು ಮಾಡುವಾಗ ರಾಜನು ಹಾದು ಹೋದನು. ನಂತರ ಒಬ್ಬ ರಾಜನು ಹೀಗೆ ಹೋದನಾ ಎಂದು ಕೇಳಿದಾಗ ಆತ ನಾನು ನನ್ನ ಕೆಲಸದಲ್ಲಿ ಮಗ್ನನಾಗಿದ್ದು ನೋಡಲಿಲ್ಲ ಎಂದನು. ಹೀಗೆ ನಾವು ಪ್ರತಿಯೊಂದು ಕಾರ್ಯ ಮಾಡಬೇಕು.
- ಸರ್ಪ: ಸರ್ಪಗಳು ಅಪಕಾರ ಮಾಡಿದ ಹೊರತು, ಕೆಣಕದ ಹೊರತು ಯಾರನ್ನು ಕಚ್ಚುವುದಿಲ್ಲ. ಅದರಂತೆಯೆ ಮಿತವಾಗಿ ಮಾತನಾಡ ಬೇಕು, ಜಗಳ ಮಾಡಬಾರದು, ಸದಾ ವಿವೇಕದಿಂದ ವರ್ತಿಸಬೇಕು, ಯಾರಿಗೂ ನೋವುಂಟು ಮಾಡಬಾರದು.
- ಜೇಡ: ಜೇಡಗಳು ಹಗಲೂ ರಾತ್ರಿ ಎನ್ನದೆ ಬಲೆಯನ್ನು ಹಣೆಯುತ್ತವೆ. ಮುಂದೆ ಮನಸ್ಸಿಗೆ ಬಂದಾಗ ಆ ಮನೆಯನ್ನೆ ನುಂಗಿ ಸ್ವತಂತ್ರವಾಗುತ್ತದೆ. ಆದುದರಿಂದ ಜಗತ್ತಿನಲ್ಲಿನ ಘಟನೆಗಳಿಗೆ ಹೆಚ್ಚಿನ ಮಹತ್ವವನ್ನು ಕೊಡಬಾರದು.
- ಕಣಜ:
ಕಣಜವು ಯಾವುದೋ ಒಂದು ಹುಳುವನ್ನು ತಂದಿಟ್ಟುಕೊಂಡು ಗಾಳಿ ಊದುತ್ತಾ ಆ ಕೀಟವನ್ನು ಕೊನೆಗೆ ಅದು ಕೂಡ ಕಣಜದ ಹುಳುವನ್ನೇ ಮಾಡುತ್ತದೆ. ಹಾಗೆಯೇ ನಾವು ಸತತ ನಮ್ಮ ಗುರಿಯ ಕಡೆಗೆ ಧ್ಯಾನ ಮಾಡಬೇಕು.